ಉಜಿರೆ ಎಸ್.ಡಿ.ಎಂ ಅ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆyಅಲ್ಲಿ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿತೆಯನ್ನು ನಡೆಸುವ ಮೂಲಕ ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಪ್ರಸನ್ನಾಕ್ಷಿ ಮತ್ತು ಭುವನ ಸಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here