ಬೆಳ್ತಂಗಡಿ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.
ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್ ಶಾಲೆಯಾಗಿ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ
