Site icon Suddi Belthangady

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ಪೂರ್ವ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವದವಿಪೂರ್ವ ವಿಭಾಗದಲ್ಲಿ ಜೂ. 26ರಂದು ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಅಂತರಾಷ್ಟ್ರೀಯ ದಿನದ ಆಚರಣೆಯ ಅಂಗವಾಗಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ.ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್. ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾವಿಧಿಯನ್ನು ನಡೆಸಿಕೊಟ್ಟರು.

Exit mobile version