ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಮತ್ತು ಟ್ರಸ್ಟೀ ಸದಸ್ಯರು ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಎಲ್ಲರಿಗೂ ಯೋಗಾಸನ ಮಾಡಿಸುವುದರ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.

ಸಂಸ್ಥೆಯ ವೈದ್ಯ ಡಾ. ಶಿವಾನಂದ ಸ್ವಾಮಿ ಅವರು ಯೋಗಾಸನದ ಮಹತ್ವವನ್ನು ವಿವರಿಸುತ್ತಾ ಯೋಗವು ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಪ್ರಾಚೀನ ಶಿಸ್ತು ಆಗಿದೆ. ಯೋಗವು ನಮಗೆ ಶಾಂತಿಯನ್ನು ಕಂಡುಕೊಳ್ಳಲು, ಒತ್ತಡವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ಸಹಾಯ ಮಾಡುತ್ತದೆ ಎಂದರು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಮತ್ತು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here