Site icon Suddi Belthangady

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆಯಲ್ಲಿ ವೈದ್ಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರ ಪ್ರದೀಪ್ ನಾವರ ಅವರು ಜೂ.27ರಂದು 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ನಾವು ಪಡೆದಿರುವ ಜ್ಞಾನ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಎಲ್ಲರೊಳಗೆ ಒಂದಾಗಲು ಸಂಘಗಳು ಪ್ರೇರಕ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಕ್ಷಮ್ ಜೈನ್ ಹಾಗೂ ಅವನಿ ನಿರೂಪಿಸಿದರು. ವಿದ್ಯಾರ್ಥಿ ಸಾವನ್ ವಂದಿಸಿದರು.

Exit mobile version