ಉಜಿರೆ: ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ – ಪ್ರತಿಜ್ಞಾ ವಿಧಿ ಭೋದನೆ

0

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ’ದ ಅಂಗವಾಗಿ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಅವರು ಮಾರ್ಗದರ್ಶನ ನೀಡಿದರು. ವಸತಿ ನಿಲಯದ ಮುಖ್ಯ ನಿಲಯ ಪಾಲಕ ವಿಶ್ವನಾಥ್ ಸಹಕರಿಸಿದರು.

ಈ ಪ್ರಯುಕ್ತ ಜಾಗೃತಿ ಹಾಗೂ ದುಷ್ಪರಿಣಾಮದ ಕುರಿತಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.

LEAVE A REPLY

Please enter your comment!
Please enter your name here