Site icon Suddi Belthangady

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ್ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಅವರು ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ಜೂ.28ರಿಂದ ಜು.1ರವರೆಗೆ ನಡೆಯಲಿರುವ ವಯೋಮಿತಿ 18 ವರ್ಷದ ಬಾಲಕರ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಶುಭ ಹಾರೈಸಿದರು.

Exit mobile version