Site icon Suddi Belthangady

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೆಸ್ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೆಸ್ ತರಬೇತಿಯನ್ನು ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಾವ್ ಚೆಸ್ ಕಾರ್ನರ್ ಇದರ ವ್ಯವಸ್ಥಾಪಕ ಸ್ಕಂದ, ಚೆಸ್ ನ ತರಬೇತುದಾರ ಸುಪ್ರೀತ್ ಭಾಗವಹಿಸಿದ್ದರು.ಶಾಲಾ ಚೆಸ್ ತರಬೇತಿ ಪಡೆಯುವ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿ ಆಧ್ಯ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಲ್ಪಿತ ಧನ್ಯವಾದವಿತ್ತರು.

Exit mobile version