ಮಡಂತ್ಯಾರು: ಶಿಕ್ಷಕರು ಅಂಧಕಾರದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ. ಆದರೆ ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಅದರ ಬಳಕೆಯ ಕುರಿತು ತಿಳಿದುಕೊಳ್ಳುವುದು ಉತ್ತಮ. ಪ್ರತಿಯೊಬ್ಬನಲ್ಲೂ ಸುಪ್ತವಾಗಿರುವ ಜ್ಞಾನವನ್ನು ಬಳಸಿಕೊಂಡು ಸಾರ್ವಕಾಲಿಕ ಸತ್ಯಗಳಾದ ದಯೆ, ಕರುಣೆ, ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ನೋಡಿಕೊಳ್ಳವಂತಾಗಬೇಕು ಎಂದು
ಉಜಿರೆ ಎಸ್. ಡಿ. ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೇಶವ.ಟಿ.ಎನ್. ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾ ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ನಾಯಕ ಶಾಶ್ವತ್ ಪ್ರೀತಂ ಅನಿಸಿಕೆ ಹಂಚಿಕೊಂಡರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ರೆನಿಶಾ ವೇಗಸ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅವಿನ್ ಹಾಗೂ ಜೊತ್ಸ್ನ್ ಜೋಸ್ ಕಾರ್ಯಕ್ರಮ ನಿರೂಪಿಸಿದರು. ಉಪನಿರ್ದೇಶಕಿ ಅನು ವಂದಿಸಿದರು.