ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53ವ) ಎಂಬವರಿಗೆ ಜೂ.30ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.1ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಶಶಿಕಲಾ ಮತ್ತು ಪುತ್ರಿ ವರ್ಷಾ ಅವರನ್ನು ಅಗಲಿದ್ದಾರೆ.
ಇಂದಬೆಟ್ಟು ನಿವಾಸಿ ವಜ್ರಾಕ್ಷ ಪೂಜಾರಿ ನಿಧನ
