8 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಧರ್ಮಸ್ಥಳದಲ್ಲಿ ಬಂಧನ

0

ಧರ್ಮಸ್ಥಳ: ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ 2011ನೇ ಸಾಲಿನಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಕ್ಬರ್ ಸಿದ್ದಿಕ್, ಎಂಬಾತನನ್ನು ಬಂಟ್ವಾಳ ಪೊಲೀಸರು ಧರ್ಮಸ್ಥಳದಲ್ಲಿ ಬಂಧಿಸಿದ್ದಾರೆ.

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಮೂಡ ಗ್ರಾಮ, ಬಂಟ್ವಾಳ ಅಕ್ಬರ್ ಸಿದ್ದಿಕ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂ. 30ರಂದು ಧರ್ಮಸ್ಥಳದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here