Site icon Suddi Belthangady

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಅಶ್ಲೀಲ ಫೊಟೋ ಬಳಕೆ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಸ್ಟೇಟಸ್ ಪೋಸ್ಟ್ ಮಾಡಿದ ಅಜಿ.ಎಂ ಜೋಸೆಫ್ ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಈ ಪೋಸ್ಟ್ ನಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುತ್ತದೆ ಹಾಗೂ ದ್ವೇಷ ಭಾವನೆಗೆ ಕಾರಣವಾಗಿದೆ ಎಂದು ದೂರು ನೀಡಲಾಗಿದ್ದು, ಅದರಂತೆ ವೇಣೂರು ಠಾಣೆಯಲ್ಲಿ 353(2)BNS 2023‌ ರಂತೆ ಪ್ರಕರಣ ದಾಖಲಿಸಲಾಗಿದೆ.

Exit mobile version