Site icon Suddi Belthangady

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ, ಅಕ್ರಮ ಸಾಗಣೆ ವಿರೋಧಿ ತಿಳುವಳಿಕೆ ಸಮಾರಂಭ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ಜೂ. 28ರಂದು ಮಹತ್ವ ಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಮಾದಕ ದ್ರವ್ಯ ದುರುಪಯೋಗದ ಅಪಾಯವನ್ನು ಕುರಿತು ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವಿಕೆ ಕುರಿತು ಜಾಗತಿಕ ಬದ್ಧತೆಯ ದ್ಯೇಯಾವನ್ನು ಹೊಂದಿತ್ತು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಜಿ. ಸುಬ್ಬಾಪುರಮಠ ಭಾಗವಹಿಸಿ ಮಾತನಾಡಿ ಮಾದಕ ದ್ರವ್ಯ ದುರುಪಯೋಗದ ಕಾನೂನಾತ್ಮಕ ಅಂಶಗಳು, ಪರಿಣಾಮಗಳು ಹಾಗು ಅಕ್ರಮ ಸಾಗಣೆಯನ್ನು ತಡೆಗಟ್ಟುವ ಕಾನೂನಿನ ಕುರಿತು ಮಾತನಾಡಿದರು. ಅವರು ನೈಜ ಘಟನೆಯ ಉದಾಹರಣೆಗಳ ಮೂಲಕ ಸಾಮಾಜಿಕ ಜವಾಬ್ದಾರಿಯ ಅಗತ್ಯತೆಯನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಭ್ಯಾಸ ಅಕಾಡೆಮಿಯ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್. ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಅರ್ಥಪೂರ್ಣ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು. ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಮೂಡಿಸುವಲ್ಲಿ ಯುವಶಕ್ತಿ ಮೌಲ್ಯಾ ವನ್ನು ತಿಳಿಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹ ಪ್ರಧ್ಯಾಪಕ ಡಾ. ಕೃಷ್ಣಾನುನ್ನಿ ಕೆ. ಪಿ. ಮಾದಕ ದ್ರವ್ಯ ವ್ಯಾಸನದ ದೈಹಿಕ ಮಾನಸಿಕ ಹಾಗೂ ಸಾಮಾಜಿಕ ಪರಿಣಾಮಗಳ ಬಗ್ಗೆ ಉಪನ್ಯಸ ನೀಡಿದರು. ಮಾದಕ ದ್ರವ್ಯ ಸೇವನೆ ತಡೆಗಟ್ಟುವಿಕೆ ಕ್ರಮಗಳು, ವ್ಯಸನಿಗಳಿಗೆ ಚಟದಿಂದ ಹೊರಬರಲು ಸಹಾಯ ಮಾಡುವ ಪ್ರಕ್ರಿಯೆಯಲ್ಲಿ ಭಾವನಾತ್ಮಕ ಸುಸ್ಥಿತಿಯ ಮಹತ್ವವನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ . ಎಂ. ಮಲ್ಲಿಕಾರ್ಜುನ ಗೌಡ ತಮ್ಮ ಅಧ್ಯಕ್ಷ ಭಾಷಣದಲ್ಲಿ ‘ ಡ್ರಗ್ ಮುಕ್ತ ‘ ಸಮಾಜ ನಿರ್ಮಾಣದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರವನ್ನು ವಿವರಿಸಿ, ತಮ್ಮ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಬದಲಾವಣೆಯ ರೂವಾರಿಗಳು ಆಗಬೇಕೆಂದು ಪ್ರೇರೇಪಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಮಾದಕ ದ್ರವ್ಯ ದುರುಪಯೋಗದ ಅಪಾಯಗಳು ಹಾಗೂ ಚಟಗಳಿಂದ ಹೊರಬರುವ ಮಾರ್ಗಗಳ ಬಗ್ಗೆ ಪರಸ್ಪರ ಸಂವಾದವನ್ನು ಸಂಪನ್ಮೂಲ ವ್ಯಕ್ತಿಗಳೊಂದಿಗೆ ನಡೆಸಿದರು. ವಿದ್ಯಾರ್ಥಿಗಳು ಹಾಗೂ ಭೋಧಕರು ಮಾದಕ ದ್ರವ್ಯ ದುರುಪಯೋಗವನ್ನು ತಡೆಗಟ್ಟಲು ಮತ್ತು ತಮ್ಮ ಸಮುದಾಯದಲ್ಲಿ ಜಾಗತಿ ಮೂಡಿಸಲು ಪ್ರತಿಜ್ಞಾ ಸ್ವೀಕಾರ ಮಾಡಿದರು. ಕಾರ್ಯಕ್ರಮದ ಭಾಗವಾಗಿ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಮಾದಕ ದ್ರವ್ಯ ದುರುಪಯೋಗದ ಗಂಭೀರ ಪರಿಣಾಮಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳನ್ನು ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಹ ಪ್ರಾಧ್ಯಾಪಕಿ ಪ್ರತೀಕ್ಷಾ ಸ್ವಾಗತಿಸಿ. ವಿದ್ಯಾಶ್ರೀ ವಂದಿಸಿದರು.

Exit mobile version