ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು. ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಬೆಳ್ತಂಗಡಿ ಅಂಗ ಸಂಸ್ಥೆಯ ಮಹಾಸಭೆಯ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ಮಜ್ಜನಿಬೈಲು ವಹಿಸಿದ್ದರು. ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನ ಎಸ್. ಹೊಳ್ಳ ಉಪಸ್ಥಿತರಿದ್ದರು.
ಕಾರ್ಯದರ್ಶಿ ಶ್ರೀ ವಿಷ್ಣು ಪ್ರಕಾಶ್ ಅವರು ವರ್ಷಪೂರ್ತಿ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಅವರು ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು.
ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಅವರು ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್. ಅಡೂರು ಅವರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.
ಈ ಮಹಾಸಭೆಯ ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೂರ್ಯ ಕಮಲ್ ಮಹಲ್ ಅಜಕೂರಿಯಲ್ಲಿ ನಡೆಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಅನುರಾಧ ಕೆ. ರಾವ್ ನಿರ್ವಹಿಸಿದರು. ಕಾರ್ಯದರ್ಶಿ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು.