ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜು.1ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಸ್ವಾ. ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿ, ಎಲ್ಲಾರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಸ್ಟ್ ಡೇಬುಟ್ ಆಕ್ಟ್ರೆಸ್ ಅವಾರ್ಡ್ ವಿನ್ನರ್ ಅಟ್ ಕೋಸ್ಟಾಲ್ ವುಡ್ ಫಿಲಂ ಅವಾರ್ಡ್ -2025ರ ವೆನ್ಸಿಟ ಡಯಾಸ್ ಅವರು ಆಗಮಿಸಿ ನಮಗೆ ಜೀವನದಲ್ಲಿ ತಾಳ್ಮೆ ಬಹು ಮುಖ್ಯ, ನಮ್ಮ ಜೀವನವು ಅರಳಬೇಕೆಂದು ಎಂದು ಹೇಳಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಮುಖ್ಯ ಅತಿಥಿಗಳಾದ ವೆನ್ಸಿಟ ಡಯಾಸ್ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ವೇದಿಕೆಗೆ ಆಗಮಿಸಿ, ತಮ್ಮ ನಾಯಕತ್ವದ ಪದವಿಯನ್ನು ಗಣ್ಯ ವ್ಯಕ್ತಿಗಳಿಂದ ಪಡೆದು, ಪ್ರತಿಜ್ಞೆಯನ್ನು ಸ್ವೀಕರಿಸಿದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದರು. 2025-26ನೇ ಶೈಕ್ಷಣಿಕ ವರ್ಷದ ಶಾಲಾ ವಿವಿಧ ಕ್ಲಬ್ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉದ್ಘಾಟಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸ್ವಾ. ದೀಪಕ್ ಲಿಯೋ ಡೇಸ ಅವರು, ಮಡಂತ್ಯಾರು ಚರ್ಚಿನ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ -ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಶಿಕ್ಷಕಿಯರಾದ ಐಡಾ ಡಿಕುನ್ಹಾ, ಮಲ್ಲಿಕಾ ಅವರು ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಎಮ್. ವೈ. ಮುಹಿಮುದ್ದೀನ್ ಹಾಗೂ ಅಶ್ನಿ ನಿರೂಪಿಸಿ, ಮಹಮ್ಮದ್ ಜುಹೈಬ್ ಅವರು ಸ್ವಾಗತಿಸಿ, ಟಯಾನಿಟ ಸಿಕ್ವೇರಾ ವಂದಿಸಿದರು.