ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.28ರಂದು ನಡೆದ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಶೇಖರ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಚಿತ್ರಲತಾ ಎ. ಅವರನ್ನು ಆಯ್ಕೆ ಮಾಡಲಾಯಿತು.
ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ನೋಟರಿ ವಕೀಲರು ಬೆಳ್ತಂಗಡಿ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಗೌಡ, ಉಪಾಧ್ಯಕ್ಷೆ ಲತಾ ಶೆಟ್ಟಿ, ಪ್ರೌಢ ಶಾಲಾ ಮುಖ್ಯೋಪಾದ್ಯಾಯ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಅವರು ಉಪಸ್ಥಿತರಿದ್ದರು.
ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಮೊಹನಾಂಗಿ ಹೆಚ್. ನಿರ್ವಹಿಸಿದರು. ಮತ್ತು ಶಿಕ್ಷಕಿ ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು.