ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮವು ಜೂ.30ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ವಿಭಾಗದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಸಂಚಾರಿ ನಿಯಮಗಳನ್ನು ಪಾಲಿಸದೆ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಕಾನೂನು ನಿಯಮಗಳನ್ನು ಪಾಲಿಸುವುದರ ಜೊತೆಗೆ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಅದಲ್ಲದೆ ಪೋಕ್ಸೊ ಕಾಯಿದೆ, ಟ್ರಾಫಿಕ್ ಸಿಗ್ನಲ್,ಅಪರಾಧ ತಡೆ,ಸೈಬರ್ ವಂಚನೆಯ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಾಹನಗಳನ್ನು ಚಲಾಯಿಸಲು ಪ್ರಾರಂಭಿಸುವ ಮುನ್ನ ಸಂಚಾರಿ ನಿಯಮಗಳನ್ನು ಕಲಿಯಲು ಸೂಚಿಸಿದರು. ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಚಿನ್ನಪ್ಪ, ಹೆಡ್ ಕಾನ್ಸ್ಟೇಬಲ್ ಸದಾಶಿವ ಉಪಸ್ಥಿತರಿದ್ದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಅಶ್ವಿನ್ ಮರಾಠೆ ನಿರೂಪಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ತೃಪ್ತಿ ಶೆಟ್ಟಿ ಕಾರ್ಯಕ್ರಮವನ್ನು ಆಯೋಜಿಸಿದರು.