ಅರಸಿನಮಕ್ಕಿ: ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

0

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಲಯ ಅರಣ್ಯ ಇಲಾಖೆ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ ಇವರ ಸಂಯುಕ್ತ ಆಶ್ರಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಯೋಗದೊಂದಿಗೆ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಶಾಲಾಭಿವೃಧ್ದಿ ಸಮಿತಿ ಸದಸ್ಯೆ ಸುಂದರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲೂಕು ಯೋಜನಾಧಿಕಾರಿ ಯಶೋಧರ ಅವರು ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ವಲಯ ಮೇಲ್ವಿಚಾರಕಿ ಶಶಿಕಲಾ ತಾಲೂಕು ಜನಜಾಗೃತಿ ವೇದಿಕೆ ಸದಸ್ಯೆ ಮಂಜುಳಾ ಕಾರಂತ್, ಅರಸಿನಮಕ್ಕಿ ಶೌರ್ಯ ಘಟಕದ ಅವಿನಾಶ್ ಭಿಡೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಮಾನಸ ಮತ್ತು ತಂಡ ಪ್ರಾರ್ಥಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಕನ್ನಡ ಶಿಕ್ಷಕಿ ದಿವ್ಯಾ ವಾಚಿಸಿದರು. ಬಳಿಕ ಶೌರ್ಯ ತಂಡ ಹಾಗೂ ಊರವರಿಂದ ಶಾಲಾ ಆವರಣದಲ್ಲಿ ಗಿಡ ನಾಟಿ ನಡೆಯಿತು.

ಆಂಗ್ಲ ಭಾಷಾ ಶಿಕ್ಷಕಿ ಶ್ರೀಚೇತನಾ, ಸೇವಾಪ್ರತಿನಿಧಿಗಳಾದ ಯಮುನಾ, ರೂಪಾ, ಸ್ವಚ್ಚತಾ ಸೇನಾನಿ ಸರೋಜಿನಿ, ಮುಂಡಾಜೆಯ ಸಚಿನ್ ಭಿಡೆ ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಯೋಜನೆಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು. ರಾಮ್ ಕುಮಾರ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here