Site icon Suddi Belthangady

ಬೆಳ್ತಂಗಡಿ: ತಾಲೂಕಿನ 16 ಸ.ಪ್ರಾ. ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

ಬೆಳ್ತಂಗಡಿ: 2025-26ನೇ ಸಾಲಿನಲ್ಲಿ ಸರಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳಲ್ಲಿ ಪ್ರಸುತ್ತ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಸರಕಾರ ಆದೇಶಿಸಿದೆ.

ಶಾಸಕ ಹರೀಶ್ ಪೂಂಜ ಅವರ ಬೇಡಿಕೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 16 ಪ್ರಾಥಮಿಕ ಶಾಲೆಗಳಾದ ನಾರಾವಿ ಸರಕಾರಿ ಪ್ರೌಢ ಶಾಲೆ, ಪಡಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುವೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳೆಂಜ ಸರಕಾರಿ ಪ್ರೌಢ ಶಾಲೆ, ಕಿಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಟ್ಟಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈರೋಳಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನಾಗಿ ಪ್ರಾರಂಭಿಸಲು ಸರ್ಕಾರವು ಆದೇಶ ನೀಡಿದೆ.

Exit mobile version