ಬೆಳ್ತಂಗಡಿ: ತಾಲೂಕಿನ ನಾಳ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವ್ಯವಸ್ಥಾಪನ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ’ ದತ್ತಿಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಸದಸ್ಯ ರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನಾರ್ದನ ಪೂಜಾರಿ ಸಲ್ಲಿಸಿರುವ ಅರ್ಜಿಯು ನ್ಯಾ| ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವ್ಯವಸ್ಥಾ ಪನ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿ ಕಾಯ್ದೆಯ ಸೆಕ್ಷನ್ 25ರ ಪ್ರಕಾರ ನೇಮಕ ಮಾಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸಿನಂತೆ ನೇಮಕಾತಿ ನಡೆದಿದೆ ಎಂದರು.
ಆಗ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು 10 ದಿನಗಳಲ್ಲಿ ಹಾಜರುಪಡಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಲ್ಲಿಸಿದ್ದ ಶಿಫಾರಸು ಪತ್ರದಲ್ಲಿ ಇದ್ದವರನ್ನು ವ್ಯವಸ್ಥಾಪನ ಸಮಿತಿಗೆ ಸದಸ್ಯರನ್ನಾಗಿನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಂತೆ ನೇಮಕ ನಡೆದಿದೆ. ಎಂ. ರಾಘವೇಂದ್ರ, ನೀನಾ ಕುಮಾರ್, ಪಿ. ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್. ರಾಘವ, ಕೆ. ಹರೀಶ್ ಹಾಗೂ ಬಿ. ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಸಿದ ದಾಖಲೆಗಳನ್ನು 10 ದಿನಗಳಲ್ಲಿ. ದತ್ತಿಗಳ ಕಾಯ್ದೆಗೆ ವಿರುದ್ಧವಾಗಿದ್ದು, ಹಾಜರುಪಡಿಸಬೇಕು ಸರಕಾರಕ್ಕೆ ನಿರ್ದೇಶಿಸಿತು. ಎಂದು ಅದನ್ನು ರದ್ದುಪಡಿಸಬೇಕು ಎಂದು. ಅರ್ಜಿಯಲ್ಲಿ ಕೋರಲಾಗಿದೆ.