ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ, ಮಂಗಳೂರು ಗ್ರಾಮಾಂತರದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಹರೀಶ್ ಕೆ.ಅವರು ಮುಂಭಡ್ತಿ ಪಡೆದು ವರ್ಗಾವಣೆಗೊಂಡಿದ್ದಾರೆ.
ಕೊಕ್ಕಡ ನಿವಾಸಿಯಾಗಿರುವ ಹರೀಶ್ ಚಿಕ್ಕಮಗಳೂರಿನ ಬಾಲ ಮಂದಿರದಲ್ಲಿ ಕರ್ತವ್ಯಕ್ಕೆ ನೇಮಕಗೊಂಡಿದ್ದರು. ನಂತರ ಮಂಗಳೂರು ಉಪನಿರ್ದೇಶಕರ ಕಚೇರಿ ಅಧೀಕ್ಷಕರಾಗಿ ನೇಮಕಗೊಂಡು ವರ್ಗಾವಣೆಗೊಂಡಿದ್ದರು. ಅಲ್ಲಿಂದ ಮಂಗಳೂರು ಗ್ರಾಮಾಂತರಕ್ಕೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಇದೀಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಮುಂಭಡ್ತಿ ಪಡೆದು ಪುತ್ತೂರಿಗೆ ವರ್ಗಾವಣೆಗೊಂಡು ಅಧಿಕಾ ಸ್ವೀಕರಿಸಿದ್ದಾರೆ.