Site icon Suddi Belthangady

ಪುದುವೆಟ್ಟು: ಶ್ರೀ ಧ. ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾಕಾರಂಜಿಯನ್ನು ಸ್ಥಳೀಯ ಪ್ರಗತಿಪರ ಕೃಷಿಕ ದೇವಣ್ಣಗೌಡ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದೇವಣ್ಣಗೌಡ ಅವರು ಶಾಲಾ ಮಟ್ಟದ ಪ್ರತಿಭಾಕಾರಂಜಿಯಿಂದ ವಿದ್ಯಾರ್ಥಿಗಳ ಪಠ್ಯತರ ಚಟುವಟಿಕೆಗಳಿಗೆ ಅವಕಾಶವನ್ನು ನೀಡಿದಂತಾಗುತ್ತದೆ ಇಂಥ ಅವಕಾಶಗಳನ್ನು ಶಾಲಾ ಮಟ್ಟದಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಶೀನಪ್ಪಗೌಡ ಅವರು ಶಾಲಾ ಮಟ್ಟದ ಪ್ರತಿಭಾ ಕಾರಂಜಿಯಿಂದ ಮಕ್ಕಳ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ, ಜೊತೆಗೆ ಮಕ್ಕಳ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಗೌರೀಶ್ ಅವರು ಸ್ವಾಗತಿಸಿದರು. ಶಾಲಾ ಶಿಕ್ಷಕಿ ಜಿತಿಕ್ಷ ಅವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದರು. ಶಾಲಾ ಶಿಕ್ಷಕಿ ಶೀಲಾ ಎನ್. ಅವರು ಧನ್ಯವಾದಗೈದರು.

Exit mobile version