ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಉಪ್ಪಿನಂಗಡಿ – ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಒತ್ತಾಯಿಸಿ ಜುಲೈ 05 ರಂದು ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ , ಕಾರ್ಯದರ್ಶಿ ಮಹೇಶ್ ಜೇಂತ್ಯಾರ್,ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ್, ನಿರ್ದೇಶಕ ಉದಯ್ ಬಿ.ಕೆ, ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ರೈ, ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ತಿಮ್ಮಪ್ಪ, ಪ್ರಮುಖರಾದ ಗಿರೀಶ್ ಬಿ.ಕೆ, ಪ್ರಭಾಕರ್ ಗೌಡ ಮುಂತಾದವರು ಭಾಗಿಯಾಗಿದ್ದರು.