Site icon Suddi Belthangady

ಧರ್ಮಸ್ಥಳ ಠಾಣೆಗೆ ಯಾವುದೇ ಕಳೆಬರವನ್ನು ವ್ಯಕ್ತಿ ನೀಡಿಲ್ಲ-ಕೇವಲ ತಲೆಬುರುಡೆ, ಕೆಲ ಭಾಗಗಳ ಎರಡು ಫೋಟೋಗಳ ಕಲರ್ ಜೆರಾಕ್ಸ್ ಸಲ್ಲಿಕೆ-ಪೊಲೀಸರಿಂದ ಪತ್ರಿಕಾ ಪ್ರಕಟಣೆ

ಧರ್ಮಸ್ಥಳ: ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ಅವುಗಳ ಮಾಹಿತಿ ನೀಡುತ್ತೇನೆಂದು ಪತ್ರ ಬರೆದು,ವಕೀಲರ ಮೂಲಕ ಪೊಲೀಸರನ್ನು ಸಂಪರ್ಕಿಸಿದ್ದ ವ್ಯಕ್ತಿ ಇದೀಗ ಎಸ್ ಪಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿರುವುದರ ಜೊತೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಎರಡು ಫೋಟೋದ ಕಲರ್ ಜೆರಾಕ್ಸ್ ನೀಡಿರುವುದಾಗಿ ಪೊಲೀಸರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಲೆಬರಹದ ಕುರಿತು ವಿಚಾರಿಸಿರುತ್ತಾರೆ ಇದಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಸ್ಪಷ್ಟನೆ ಏನೆಂದರೆ, ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಲೆಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version