Site icon Suddi Belthangady

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ ಮತ್ತು ಇತರ ಕಾಮಗಾರಿ ಮಾಡುವ ಕಾರ್ಮಿಕರು ಭಾರೀ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮರಳು ಮತ್ತು ಕೆಂಪು ಕಲ್ಲಿನ ಲಭ್ಯತೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕಾರ್ಮಿಕರ ಬದುಕಿಗೆ ಧಕ್ಕೆಯಾಗಿದೆ. ಈ ಗಂಭೀರ ಪರಿಸ್ಥಿತಿಗೆ ಸರಿಯಾದ ಪರಿಹಾರ ಒದಗಿಸಬೇಕೆಂಬ ಒತ್ತಾಯದೊಂದಿಗೆ, ಜು.7ರಂದು ಬೆಳಿಗ್ಗೆ 10:30ಕ್ಕೆ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ. ಎಂದು ಜಿಲ್ಲಾಧ್ಯಕ್ಷರು ಭಾ.ಮ.ಸಂಘ ದಕ್ಷಿಣ ಕನ್ನಡ ಜಿಲ್ಲೆ ಅನಿಲ್ ಕುಮಾರ್ ಯು. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Exit mobile version