Site icon Suddi Belthangady

ಉಜಿರೆ: ಶ್ರೀ ಧ.ಮಂ. ಅ. ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಜು.5ರಂದು ನಡೆಯಿತು.

ಎಸ್. ಡಿ. ಎಂ ಎಜುಕೇಶನಲ್ ಸೊಸೈಟಿಯ ಶಿಕ್ಷಣ ಸಂಯೋಜಕ ಎಸ್.ಎನ್. ಕಾಕತ್ಕರ್ ಉದ್ಘಾಟನೆ ನೆರವೇರಿಸಿ ಮಾತನಾಡಿ ಕಲಿಕೆಯ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅಗತ್ಯ ಎಂದರು.

ಕಿರು ಯಕ್ಷಗಾನ ಪ್ರಸಂಗ, ವಿದ್ಯಾರ್ಥಿನಿಯರಿಂದ ನೃತ್ಯ, ಕ್ರೀಡಾಪಟುಗಳಿಗಾಗಿ ಹೊಸ ಅಂಕಣ ಉದ್ಘಾಟನೆ ನಡೆಯಿತು.

ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಯಕ್ಷಗಾನ ತರಬೇತುದಾರ ಲಕ್ಷ್ಮಣಗೌಡ ಬೆಳಾಲು, ನೃತ್ಯ ತರಬೇತುದಾರ ಚೈತ್ರ,ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಕೂಸಪ್ಪ ಗೌಡ ಸ್ವಾಗತಿಸಿ, ಶಿಕ್ಷಕಿಯರಾದ . ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಸುಜಾತ ವಂದಿಸಿದರು.

Exit mobile version