ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ಉದ್ಘಾಟನಾ ಸಮಾರಂಭ

0

ಲಾಯಿಲ: ಜು.4ರಂದು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ಪರಿಷತ್ತು ಚುನಾವಣೆಯಲ್ಲಿ ಆಯ್ಕೆಯಾದ ನಾಯಕರುಗಳಿಗೆ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಸಾಹಿತ್ಯ ಸಂಘದ ಸದಸ್ಯರು ಇದರ ನೇತೃತ್ವವನ್ನು ವಹಿಸಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಹಳೆ ವಿದ್ಯಾರ್ಥಿ ಸುಶ್ರುತ್ ಮುಖ್ಯ ಅತಿಥಿಯಾಗಿ ಆಗಮಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಪ್ರೀತಿ ಜಾರ್ಜ್ ಅವದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ನಾಯಕರುಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು. ಸುಶ್ರುತ್ ವಿದ್ಯಾರ್ಥಿ ಜೀವನದಲ್ಲಿ ಹೇಗೆ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕೆಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಪ್ರೀತಿ ಜಾರ್ಜ್ ಅವರು ಮಕ್ಕಳಿಗೆ ಹಿತನುಡಿಗಳನ್ನು ನುಡಿದರು. ಹಾಗೂ ಶಾಲಾ ನಾಯಕರುಗಳು ನಿರ್ವಹಿಸಬೇಕಾದ ಕರ್ತವ್ಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿ ಸಿ. ಎಲ್ಸಿ ಪಾಲಾಟ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹ ಶಿಕ್ಷಕ ವರ್ನನ್ ಮೆನ್ಡೋನ್ಸರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಿಸ್ಟರ್ ಲಿಂಡಾ ಅವರು ಸ್ವಾಗತಿಸಿದರು. ಹಾಗೂ ರಮ್ಯ ಅವರು ವಂದಿಸಿದರು.

LEAVE A REPLY

Please enter your comment!
Please enter your name here