Site icon Suddi Belthangady

ಕೊಕ್ರಾಡಿ: ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಕೊಕ್ರಾಡಿ: ಸರಕಾರಿ ಪದವಿ ಪೂರ್ವ ಕಾಲೇಜಿನ 2025 -26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜು ಸಭಾಂಗಣದಲ್ಲಿ ನೆರವೇರಿತು. ವಿದ್ಯಾರ್ಥಿ ಸಂಘವನ್ನು ನಿವೃತ್ತ ಪ್ರಾಂಶುಪಾಲ ನೋರ್ಬರ್ಟ್ ಮಾರ್ಟಿಸ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿ ಸಂಘದ ಮಹತ್ವವನ್ನು ತಿಳಿಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ದಯಾನಂದ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನ್ ಅಂಡಿಂಜೆ ಅವರು ವಿದ್ಯಾರ್ಥಿಗಳಿಗೆ ಒಗ್ಗಟ್ಟಿನ ಮಹತ್ವವನ್ನು ತಿಳಿಸಿ, ಶುಭ ಹಾರೈಸಿದರು. ಕಾಲೇಜು ಅಭ್ಯರ್ಥಿ ಸಮಿತಿಯ ಸದಸ್ಯ ಚಂದ್ರಶೇಖರ ಭಟ್ ಅವರು ಶುಭ ಹಾರೈಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಲಕ್ಷ್ಮಿ ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿದ್ಯಾರ್ಥಿ ಕೀರ್ತನ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕ ವೆಂಕಟೇಶ್ ಅವರು ವಂದಿಸಿದರು.

Exit mobile version