ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಭಾರತೀಯ ಮಜ್ದೂರ್ ಸಂಘ ತಾಲೂಕಿನ ಸಮಿತಿ, ಬೆಳ್ತಂಗಡಿ ತಾಲೂಕು ಸಹಭಾಗಿತ್ವದಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ ಮತ್ತು ಇತರ ಕಾಮಗಾರಿ ಮಾಡುವ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆಯು ಜು.7ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಭಾರತೀಯ ಮಜ್ದೂರ್ ಸಂಘ ತಾಲೂಕಿನ ಸಮಿತಿ ಅಧ್ಯಕ್ಷರು, ವಕೀಲರು ಉದಯ್ ಕುಮಾರ್ ಬಿಕೆ ವಹಿಸಿದ್ದರು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎನ್ ರಮೇಶ್, ರಾಜ್ಯ ಉಪಾಧ್ಯಕ್ಷ ಅಶ್ವಥ್ ಮರಿಗೌಡ್ರು ಬೆಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಸಂಚಾಲಕ ಕುಮಾರ್ ವೈ ಚಿತ್ರದುರ್ಗ, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಉಪಸ್ಥಿತರಿದ್ದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾರತೀಯ ಮಜ್ದೂರ್ ಸಂಘ ತಾಲೂಕಿನ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಉಪಸ್ಥಿತರಿದ್ದರು.