Site icon Suddi Belthangady

ಇಂದಬೆಟ್ಟು: ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಇಂದಬೆಟ್ಟು: ಜು.7ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಹಿರಿಯ ಸದಸ್ಯ ವೀರಪ್ಪ ಮೊಯ್ಲಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್. ಇಂದಬೆಟ್ಟು ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಅವರು ಸ್ವಾಗತಿಸಿದರು. ಸಂಸ್ಥೆಯ ರಾಮಚಂದ್ರ ಅವರು ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಸಮೃದ್ಧಿ ಸಂಜೀವಿನಿ ಒಕ್ಕೂಟದ ಸೌಮ್ಯ, ಕವಿತಾ, ಪಂಚಾಯತ್ ಸಿಬ್ಬಂದಿಗಳು, ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Exit mobile version