ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಆರೋಗ್ಯ ಕಾರ್ಯಕ್ರಮ ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಇವರ ಸಂಯುಕ್ತಾ ಆಶ್ರಯದಲ್ಲಿ ಜು. 7ರಂದು ಜರುಗಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸುಜಾತ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮಲೇರಿಯಾ ಕಾಯಿಲೆ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಕೈಗೊಳ್ಳಬಹುದಾದ ವೈಯಕ್ತಿಕ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ತಿಳಿಸಿದರು. ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಸ್ವತಂತ್ರ ರಾಜ, ಸಿ.ಹೆಚ್.ಒ. ದಿನೇಶ್ ಸಿ., ಆರೋಗ್ಯ ಸಹಾಯಕಿ ಸುಜಾತಾ, ಉಜಿರೆ ವಲಯದ ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.