Site icon Suddi Belthangady

ಓಡಿಲ್ನಾಳ: ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಓಡಿಲ್ನಾಳ: ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು. ಶಾಲಾ ಎಸ್‌. ಡಿ. ಎಂ. ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಅವರು ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಗೆ ಚಾಲನೆಯನ್ನು ನೀಡಿ, ಶಾಲಾ ಭೌತಿಕ ಸೌಲಭ್ಯಗಳ ಕುರಿತು ಹೆಮ್ಮೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಉಷಾ ಪಿ. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಶಾರದಾ ಮಣಿ ನಿರೂಪಿಸಿ, ನಯನ ಟಿ. ಧನ್ಯವಾದ ನೀಡಿದರು.

Exit mobile version