ಉಜಿರೆ ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ಸಂಸ್ಥಾಪನ ದಿನಾಚರಣೆ, ಚಿಣ್ಣರ ಆಟದ ಮನೆ ಉದ್ಘಾಟನೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸ್ಥಾಪನ ದಿನಾಚರಣೆ ಹಾಗೂ ನೂತನ ಚಿಣ್ಣರ ಆಟದ ಮನೆ ಉದ್ಘಾಟನೆ ಜು.8ರಂದು ನಡೆಯಿತು.

ಶಾಲಾ ಶತಮಾನೋತ್ಸವ ಸಮಿತಿ ಮತ್ತು ಶಿಕ್ಷಕರಕ್ಷಕ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಆಟದ ಮನೆ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಸುಪ್ರಿಯ ಹರ್ಷೇಂದ್ರ ಕುಮಾರ್ ಅವರು ಹಿಂದೆ ಅವಿಭಕ್ತ ಕುಟುಂಬ ವ್ಯವಸ್ಥೆಯಿಂದಾಗಿ ಮಕ್ಕಳಲ್ಲಿ ಒಂಟಿತನ ಕಾಡುತ್ತಿರಲಿಲ್ಲ ಇಂದು ಮೈಕ್ರೋ ಫ್ಯಾಮಿಲಿ ಪರಿಕಲ್ಪನೆ ಯಿಂದಾಗಿ ಕಿಂಡರ್ ಗಾರ್ಡನ್ ಅಂತಹ ಸಂಸ್ಕೃತಿ ಬೆಳೆದುಕೊಂಡಿದೆ.

ಈ ನಿಟ್ಟಿನಲ್ಲಿ ಆಟದ ಮನೆ ವ್ಯವಸ್ಥೆಯು ಮಕ್ಕಳಿಗೆ ಪ್ರಯೋಜನಕಾರಿ ಎಂದರು. ಎಸ್. ಡಿ. ಎಂ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್. ಮಾತನಾಡಿ, ಮಕ್ಕಳ ವಿದ್ಯಾರ್ಥಿನಿಯರಿಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಒದಗಿಸಿಕೊಡುತ್ತಿದೆ. ಶತಮಾನೋಷ ಸಮಿತಿಯಿಂದ ತಿಂಗಳಿಗೆ ಒಂದು ಕಾರ್ಯಕ್ರಮ ಆಯೋಜಿಸುತ್ತಿರುವುದು ಪ್ರಶಂಸನೀಯ ಎಂದರು.
ಪ್ರಸ್ತುತ ಆಂಗ್ಲ ಮಾಧ್ಯಮ ಶಾಲೆಗಳ ನಡುವೆ ಶತಮಾನೋತ್ಸವ ಆಚರಿಸುತ್ತಿರುವ ಈ ಶಾಲೆಯಲ್ಲಿ ಅತ್ಯುತ್ತಮ ಸಂಖ್ಯೆಯ ವಿದ್ಯಾರ್ಥಿಗಳಿರುವುದು ಶ್ಲಾಘನೆ ಎಂದರು.

ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಾಂತ ಮತ್ತು ಈಶ್ವರ ದೇವಾಡಿಗ ಇವರನ್ನು ಅವರ ನಿವಾಸದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಪರವಾಗಿ ಸನ್ಮಾನಿಸಲಾಯಿತು.
ಎಸ್ಎಂ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಡಾಕ್ಟರ್ ಸತೀಶ್ ಚಂದ್ರ ಎಸ್. ಅವರು ಮಾತನಾಡಿದರು. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನು ನಾಡಿದ ಶಾಲಾ ಶತಮಾನದ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಶಾಲಾ ಪ್ರಾರಂಭವಾದ ದಿನಗಳನ್ನು ಮಲುಕು ಹಾಕಿದರು.

ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕ-ರಕ್ಷಕ ಸಂಘದ ಅಧಿಕಾರಿಗಳು ಪೋಷಕರು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸೋಮಶೇಖರ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here