Site icon Suddi Belthangady

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ನೋಟಿಸ್

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರಾಗಿರುವ ಉಜಿರೆ ಗ್ರಾಮದ ಮಹೇಶ್ ಶೆಟ್ಟಿ ತಿಮರೋಡಿ (೫೩ ವ)ರವರಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಲಾಗಿದೆ.

ಮಹೇಶ್ ಶೆಟ್ಟಿ ವಿರುದ್ಧ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ, ಬಂಟ್ವಾಳ ಇವರು ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ಕಲಂ ೫೫ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆಯನ್ನು ದಿನಾಂಕ ೧೮-೦೭-೨೦೨೫ಂದು ಪೂರ್ವಾಹ್ನ ೧೧.೩೦ಕ್ಕೆ ನಿಗದಿಪಡಿಸಲಾಗಿದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳಿಗೆ ಕಾರಣ ಕೇಳುವ ನೋಟೀಸನ್ನು ಈ ಸೂಚನಾ ಪತ್ರದೊಂದಿಗೆ ಲಗ್ತೀಕರಿಸಿದೆ.

ಅದುದರಿಂದ ಸದ್ರಿ ಪ್ರಕರಣದಲ್ಲಿ ನೀವು ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಗಡಿಪಾರು ಮಾಡಲು ಸಿದ್ಧತೆ ನಡೆಸಲಾಗಿದ್ದ ಹಲವರಿಗೆ ನೊಟೀಸ್ ಜಾರಿಯಾಗಿದ್ದರೂ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್ ಶೆಟ್ಟಿಯವರಿಗೆ ನೋಟೀಸ್ ಜಾರಿಯಾಗಿರಲಿಲ್ಲ.

Exit mobile version