ಚಾರ್ಮಾಡಿ: ಘಾಟಿಯ ಒಂದನೇ ತಿರುವಿನ ಬಳಿ ಮರ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಜು.10ರಂದು ಮುಂಜಾನೆ ನಡೆದಿದೆ.
ಲಾರಿ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಒಂದು ತಾಸು ಹೊತ್ತು ಘಾಟಿಯಲ್ಲಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.