ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

0

ಬೆಳ್ತಂಗಡಿ: ಮನುಷ್ಯನಿಗೆ ಮಾನವೀಯತೆಯನ್ನು ತಿಳಿಸುವಲ್ಲಿ ಸಂಸ್ಕೃತಿ ಸಂಸ್ಕಾರಗಳ ಪಾತ್ರ ಮಹತ್ವವಾದದ್ದು ಎಂದು ಉಜಿರೆ ಎಸ್. ಡಿ. ಎಂ ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಂಪರಾ ವೇದಿಕೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ-ಸಂಸ್ಕಾರ ಎನ್ನುವ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮವಾದ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಜೀವನದಲ್ಲಿ ಸಿಗುವ ಅವಕಾಶಗಳನ್ನು ಕೈ ಚೆಲ್ಲದೆ ಸದು ಉಪಯೋಗಿಸಿಕೊಂಡಾಗ ಯಶಸ್ಸನ್ನು ಗಳಿಸಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಪರಂಪರಾ ವೇದಿಕೆಯ ಸಂಯೋಜಕರಾದ ರವಿಶಂಕರ್ ಮತ್ತು ಕಿಶೋರಿ ಎಸ್. ರಾವ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೂಜಾ ಸ್ವಾಗತಿಸಿದರು. ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು. ಡೆಲಿಷಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here