ಧರ್ಮಸ್ಥಳ:
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಆ ಪ್ರಕಾರ ” ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
.
Home Uncategorized ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತಿದ್ದೇನೆಂದ ವ್ಯಕ್ತಿ ದೂರು ಪ್ರಕರಣ-ಕಾಲ್ಪನಿಕ ಮತ್ತು ಸುಳ್ಳು ಎಐ ವೀಡಿಯೋ ಮಾಡಿರುವ...