ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದು, ಜು.13ರಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.