ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಮತ್ತು ಬೆಳ್ತಂಗಡಿ, ಜೀನಿಯಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಜಂಟಿ ಆಶ್ರಯದಲ್ಲಿ ಜು.12ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಕಾಲೇಜಿನ ಪ್ರಾಂಶುಪಾಲ ಕೆ.ಸುಕೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜೀನಿಯಸ್ ಕೋಚಿಂಗ್ ಸೆಂಟರ್ ನ ಮುಖ್ಯಸ್ಥ ಸ್ವಸ್ತಿಕ ಜೈನ್ ಸಿಇಟಿ ನೀಟ್ ಬಗ್ಗೆ ಮಾಹಿತಿ ನೀಡಿ ತರಬೇತಿ ನೀಡಿದರು.
ಶಾನಿಕ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಗಣಿತಶಾಸ್ತ್ರ ಉಪನ್ಯಾಸಕಿ ಮಾಯ ಭಟ್ ಸ್ವಾಗತಿಸಿದರು. ವೇದಿಕೆಯಲ್ಲಿ ಭೌತಶಾಸ್ತ್ರ ಉಪನ್ಯಾಸಕಿ ಅನನ್ಯ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಸೌಜನ್ಯ ವಂದಿಸಿದರು.