Site icon Suddi Belthangady

ಉರುವಾಲು: ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಶ್ರೀಮದ್ ಜಗದ್ಗುರು ಶಂಕರಾಚಾರ್ಯ ರಾಘವೇಂದ್ರ ಭಾರತೀ ಮಹಾ ಸ್ವಾಮಿಗಳ 50ನೇ ವರ್ಧಂತಿ ಪ್ರಯುಕ್ತ ಶ್ರೀ ಭಾರತಿ ವಿದ್ಯಾಸಂಸ್ಥೆ ಉರುವಾಲುವಿನಲ್ಲಿ ಜು.12ರಂದು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವರ ಸಹಯೋಗದೊಂದಿಗೆ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭಗೊಂಡು ಬಳಿಕ ಅಥಿತಿ ಗಣ್ಯರಿಂದ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಮಂಡಲದ ಅಧ್ಯಕ್ಷ ಪ್ರಸನ್ನ ಪೇರ್ನೆ ಕೋಡಿ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಳ, ರವಿರಾಜ್ ಉರುವಾಲು ರಾಜ ಮಂದಿರ, ಉರುವಾಲು ವಲಯದ ಅಧ್ಯಕ್ಷ ಕೃಷ್ಣ ಭಟ್ ಹತ್ತೊಕ್ಕಲು ಆಗಮಿಸಿದ್ದರು.

ಸಭಾಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ಅವರು ವಹಿಸಿದ್ದರು. ಸೇವಾ ಸಮಿತಿಯ ಅಧ್ಯಕ್ಷೆ ಚಂದ್ರಿಕಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿ ಗಣ್ಯರನ್ನು ಸ್ವಾಗತ ಮಾಡಿದರು. ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸದಸ್ಯ ಶಿಕ್ಷಕ ಸಂಘದ ಸದಸ್ಯರು, ಪೋಷಕ ವೃಂದದವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಸಹಶಿಕ್ಷಕ ಮಂಜು ಗಣೇಶ್ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ.ಆರ್. ಧನ್ಯವಾದ ಸಮರ್ಪಿಸಿದರು.

Exit mobile version