ಕಕ್ಕಿಂಜೆ: ಜು.14ರಂದು ಮಂಗಳೂರಿನ (ಕೆ.ಎಂ.ಸಿ) ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ತಜ್ಞವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರ ಬಗ್ಗೆ ಚರ್ಚಿಸಿದರು. ಹಾಗೂ ಕೆ.ಎಂ.ಸಿ. ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗವು (Department of Community Medicine) ಮತ್ತು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯೊಂದಿಗೆ ಹೊಸಒಡಂಬಡಿಕೆಯನ್ನು ಮಾಡಿಕೊಂಡಿದೆ, ಈ ಒಡಂಬಡಿಕೆಯು ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞವೈದ್ಯರ ಲಭ್ಯತೆ, ಉತ್ತಮ ವೈದ್ಯಕೀಯ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸಲು, ಗುಣಮಟ್ಟದ ಆರೋಗ್ಯ ಸೇವೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ. ಮತ್ತು ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ತಜ್ಞವೈದ್ಯರು ಪ್ರತಿದಿನ ಸಂದರ್ಶನಕ್ಕೆ ಲಭ್ಯರಿರುತ್ತಾರೆ.

ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೆಶಕ ಡಾ.ಮುರಳಿಕೃಷ್ಣ ಇರ್ವತ್ರಾಯ, ಕೆ.ಎಂ.ಸಿ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ, ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೆಸರ್ ಗಳಾದ ಡಾ.ಮಿಥುನ್ ಹಾಗೂ ಡಾ.ಅಜಿತ್, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ. ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬೀನ್ ಜೋಸೆಫ್, ವೈದ್ಯಾಧಿಕಾರಿ ಡಾ.ಮೌಲ್ಯ ಆಡಳಿತಾಧಿಕಾರಿ ಜ್ಯೋತಿ ವಿ. ಸ್ವರೂಪ್ ಮೊದಲಾದವರು ಉಪಸ್ಥಿತರಿದ್ದರು.