ಕನ್ಯಾಡಿ: ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಅವರು ಜು. 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು. ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26ನೇ ಸಾಲಿನಲ್ಲಿ ಒಟ್ಟು 10ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ. ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.