


ನಿಟ್ಟಡೆ: ಸ.ಉ ಪ್ರಾ. ಶಾಲೆಯಲ್ಲಿ ಪೋಷಕರ ಸಭೆ, ವಿವಿಧ ಶಾಲಾ ಸಂಘಗಳ ಉದ್ಘಾಟನೆ ಹಾಗೂ ಅರಿವು ಕಾರ್ಯಕ್ರಮ ಜು. 14 ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷ ಮಹಮ್ಮದ್ ಅಶ್ರಫ್, ಉಪಾಧ್ಯಕ್ಷೆ ಸ್ವಾತಿ, ಸದಸ್ಯರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಶ್ರೀಶೈಲ ಡಿ. ಮುರುಗೋಡ ಶಾಲಾ ವಿದ್ಯಾರ್ಥಿನಿಯಾದ ಎಸ್. ಟಿ. ಎಂ. ಸಿ. ಸದಸ್ಯೆ ದಿವ್ಯ, ತಾಯಂದಿರ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷರು, ಶಾಲಾ ಪ್ರಭಾರ ಮುಖೋಪಾಧ್ಯಾಯನಿ ಆರತಿ, ಸಹ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಾಲೆ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಆರತಿ ಸ್ವಾಗತಿಸಿದರು. ನಂತರ ವಿನೂತನ ಶೈಲಿಯಲ್ಲಿ ವಿವಿಧ ಶಾಲಾ ಸಂಘಗಳನ್ನು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ಕುಕ್ಕೇಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಅನಿತಾ, ವೇಣೂರು ಪೊಲೀಸ್ ಠಾಣೆ ಉಪನಿರೀಕ್ಷಕ ಶ್ರೀಶೈಲ ಡಿ. ಮುರಗೋಡ ಅವರು ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವೇಣೂರ್ ಠಾಣೆಯ ಉಪನಿರೀಕ್ಷಕರು ಮಕ್ಕಳ ರಕ್ಷಣಾ ವ್ಯವಸ್ಥೆಗಳು, ಮಕ್ಕಳ ಸುರಕ್ಷತೆ, ಮಾದಕ ವ್ಯಸನಗಳ ದುಷ್ಪರಿಣಾಮ ಗಳು, ಅಂತರ್ಜಾಲ ಸುರಕ್ಷತೆ ಇತ್ಯಾದಿ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಸಂಪನ್ಮೂಲ ವ್ಯಕ್ತಿ ದಿವ್ಯ ಅವರು ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ಕಾನೂನುಗಳು, ಸುರಕ್ಷಿತ, ಅಸುರಕ್ಷಿತ ಸ್ಪರ್ಶ, ಇತ್ಯಾದಿ ವಿಷಯಗಳ ಬಗ್ಗೆ ಪೋಷಕರಿಗೆ ವಿದ್ಯಾರ್ಥಿಗಳೊಂದಿಗೆ ವಿಚಾರ ವಿನಿಮಯ ಮಾಡಿದರು.
ತದನಂತರ ಸಂಪನ್ಮೂಲ ವ್ಯಕ್ತಿಗಳಿಗೆ ಶಾಲಾ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಅಧ್ಯಕ್ಷ ಸ್ಥಾನ ವಹಿಸಿದ ಮಹಮ್ಮದ್ ಅಶ್ರಫ್ ಪೋಷಕರನ್ನು ಕುರಿತು ಶಾಲಾ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಸಹ ಶಿಕ್ಷಕಿ ಸ್ಮಿತಾ ನಿರೂಪಿಸಿದರು. ಈ ಕಾರ್ಯಕ್ರಮಕ್ಕೆ ಶಿಕ್ಷಕರು ಸಹಕರಿಸಿದರು. ಸಹಶಿಕ್ಷಕ ಗಣೇಶ್ ವಂದಿಸಿದರು.










