Site icon Suddi Belthangady

ಉಜಿರೆ :ಅನುಗ್ರಹದಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ದಿನಾಂಕ ಜು.16ರಂದು ಮಾಹಿತಿ ಕಾರ್ಯಾಗಾರ ನಡೆಯಿತು. ಸ್ಥಳೀಯ ಆಶಾ ಕಾರ್ಯಕರ್ತೆಯರಾದ ನಳಿನಿ ಮತ್ತು ಸುಮಂಜಲ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು. ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿ ಕೊಟ್ಟರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Exit mobile version