ಬಂದಾರು: ಗ್ರಾಮದ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಪುಷ್ಪಾವತಿ ಸದಸ್ಯರಾದ ಚೇತನ್ ಕುಮಾರ್, ವಿಮಲ, ಭಾರತಿ, ಗಂಗಾಧರ್ ಪೂಜಾರಿ, ಸುಚಿತ್ರಾ, ಅನಿತಾ, ಶಿವ ಗೌಡ, ಬಾಲಕೃಷ್ಣ ಗೌಡ ಎಂ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ . ಸ್ವಾಗತಿಸಿ, ಪಂಚಾಯತ್ ಸದಸ್ಯ ಚೇತನ್ ಧನ್ಯವಾದವಿತ್ತರು.