Site icon Suddi Belthangady

ಕೊಕ್ಕಡ: ಕಾಡಾನೆ ದಾಳಿಗೆ ವ್ಯಕ್ತಿ ಸಾವು-ಅರಣ್ಯ ಸಚಿವ ಸಂತಾಪ-ಆನೆಗಳನ್ನು ಕಾಡಿಗೆ ಕಳುಹಿಸಲು ಇಲಾಖೆಗೆ ಸೂಚನೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಸೌತಡ್ಕ ಬಳಿ ಆನೆ ದಾಳಿಯಿಂದ ಬಾಲಕೃಷ್ಣ ಶೆಟ್ಟಿ (60) ಸಾವನಪ್ಪಿರುವ ಘಟನೆ ನಡೆದಿದ್ದು ಜು.17ರಂದು ನಡೆದಿತ್ತು. ಈ ಘಟನೆ ಕುರಿತಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಮೃತ ಬಾಲಕೃಷ್ಣ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಖಂಡ್ರೆ ಪ್ರಾರ್ಥಿಸಿದ್ದಾರೆ. ಮೃತರ ಹತ್ತಿರದ ಬಂಧುಗಳಿಗೆ ಕೂಡಲೇ ಪರಿಹಾರದ ಮೊತ್ತ 20ಲಕ್ಷ ಪಾವತಿಸುವಂತೆ ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Exit mobile version