Site icon Suddi Belthangady

ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳು ಮಾಹಿತಿ ಕಾರ್ಯಗಾರ

ಉಜಿರೆ: ಜೂ. 26ರಂದು ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ಅನುಗ್ರಹ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಹಾಗೂ ಅದರ ದುಷ್ಪರಿಣಾಮಗಳು ಎಂಬ ವಿಷಯದ ಬಗ್ಗೆ ಜು.18ರಂದು ಅನುಗ್ರಹ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಫಾ. ವಿಜಯ್ ಲೋಬೊ ವಹಿಸಿದ್ದರು. ಮಾತನಾಡಿದ ಅವರು ಮಾದಕ ವಸ್ತುಗಳು ಹವ್ಯಾಸವಾಗಿ ಹೇಗೆ ಚಟವಾಗಿ ಮಾರ್ಪಾಡುತ್ತಿದೆ. ಎಂಬುದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿ ವೃತ್ತಕಚೇರಿ ಕಾನ್ಸ್ ಟೇಬಲ್ ವಿಜಯಕುಮಾರ್ ರೈ ಮಾದಕ ವಸ್ತುಗಳು ಎಂದರೇನು? ಅಪ್ರಾಪ್ತ ವಯಸ್ಕರು ಹೇಗೆ ಇದಕ್ಕೆ ಬಲಿಯಾಗುತ್ತಿದ್ದಾರೆ? ಹಾಗೂ ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪೊಲೀಸ್‌ ಸಿಬ್ಬಂದಿಗಳಾದ ಪ್ರಶಾಂತ್ ಹಾಗೂ ಸಂತೋಷ್ ಅವರು ಉಪಸ್ಥಿತರಿದ್ದರು. ಸಹ ಶಿಕ್ಷಕ ಗಣೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದಗಳನ್ನು ಅರ್ಪಿಸಿದರು.

Exit mobile version