Site icon Suddi Belthangady

ಸೌತಡ್ಕ: ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರೈ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಕೊಕ್ಕಡ: ಸೌತಡ್ಕದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರೈ ರವರ ಮನೆಗೆ ಶಾಸಕ ಹರೀಶ್ ಪೂಂಜ ಜು.17ರಂದು ಭೇಟಿ ನೀಡಿ ಸಾಂತ್ವನ ಹೇಳಿದರು.

ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಶಕ್ತಿ ಕೇಂದ್ರದ ಮತ್ತು ಪ್ರಸ್ತುತ ಕೊಕ್ಕಡ ಗ್ರಾ.ಪಂ. ಸದಸ್ಯ ಯೋಗೀಶ್ ಅಲಂಬಿಲ, ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಗ್ರಾ.ಪಂ.ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ವಿಠಲ ಕುರ್ಲೆ, ಪ್ರಶಾಂತ್ ಪೂವಾಜೆ, ರಂಜು ಕೊಕ್ಕಡ, ರಾಘವ ಭಂಡಾರಿ, ಉದ್ಯಮಿ ಬಾಲಕೃಷ್ಣ ನೈಮಿಷ, ಪಕ್ಷದ ಕಾರ್ಯಕರ್ತರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಪ್ರೊಫೆಷನರಿ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version