ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸುಪ್ರಿಯಾ ಅವರು ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಮಕಲ್ ನಲ್ಲಿ ನಡೆದ ಮಹಿಳೆಯರ ರಾಷ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದಿರುತ್ತಾರೆ. ಅವರನ್ನು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಎಚ್., ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ನೆಟ್ಬಾಲ್ ತರಬೇತುದಾರ ಸುದಿನ, ನಿತಿನ್ ಅಭಿನಂದಿಸಿದ್ದಾರೆ.
ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ನೆಟ್ ಬಾಲ್ ಆಟಗಾರ್ತಿಗೆ ರಾಷ್ಟ್ರಮಟ್ಟದಲ್ಲಿ ಕಂಚು
