ಬೆಳ್ತಂಗಡಿ: ಹೃದಯ ಮತ್ತು ಮನಸ್ಸುಗಳನ್ನು ಅರಳಿಸುವ ಹಾಗು ಮಳೆಗಾಲದ ಸಂದರ್ಭದಲ್ಲಿ ಎಲ್ಲರೂ ಸೇರಿ ಪರಸ್ಪರ ಕಷ್ಟ ಸುಖ ವಿಚಾರಿಸಿಕೊಳ್ಳುವ ಕಾರ್ಯಕ್ರಮ ಈ ಆಟಿಡೊಂಜಿ ದಿನ ಎಂದು
ಬೆಳ್ತಂಗಡಿ ಜ್ಯೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಹೇಳಿದರು.
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಜು.19ರಂದು ಒಕ್ಕೂಟದ ಸಭಾಂಗಣದಲ್ಲಿ ನಡೆದ “ಆಟಿಡೊಂಜಿ ದಿನ” ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಉಮಾ ಆರ್. ರಾವ್ ವಹಿಸಿದ್ದರು.
ಜೆಸಿಐ ಬೆಳ್ತಂಗಡಿ ಅಧ್ಯಕ್ಷ ಆಶಾ ಪ್ರಶಾಂತ್ ಚೆನ್ನೆ ಮನೆ ಆಡುವ ಮೂಲಕ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿಯ ನಿಕಟ ಪೂರ್ವ ಅಧ್ಯಕ್ಷ ಲ|ದೇವದಾಸ್ ಎಲ್. ಶೆಟ್ಟಿ, ಬೆಳ್ತಂಗಡಿ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಶಾಂತ ಬಂಗೇರ, ಗೌರವಾಧ್ಯಕ್ಷ ಸವಿತಾ ಜಯದೇವ್, ಜತೆ ಕಾರ್ಯದರ್ಶಿ ಗೀತಾ ಜಯವರ್ವ, ಕೋಶಾಧಿಕಾರಿ
ಯಶೋಧ ಲ್ಯಾಲ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಒಕ್ಕೂಟದ ಸ್ಥಾಪಕಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಒಕ್ಕೂಟದ ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಾಂತ್ವಾನ ಕೇಂದ್ರದ ಸಿಬ್ಬಂದಿಗಳಾದ ಸೌಮ್ಯ ಬಳಗದಿಂದ ಪ್ರಾರ್ಥನೆ ಮಾಡಿದರು.